WELCOME TO NAMO BRIGADE SHAHABAD OFFICIAL WEBSITE

ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ


ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ, ಏಪ್ರಿಲ್ 22: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡುವ 40 ಸ್ಟಾರ್ ಪ್ರಚಾಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ವಿಶೇಷವಾಗಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿಯಂಥ ಹಿರಿಯರನ್ನು, ಜೊತೆಗೆ ಮಾಳವಿಕಾ ಅವಿನಾಶ್ ಮತ್ತು ಶಿಲ್ಪಾ ಗಣೇಶ್ ರನ್ನೂ ಈ ಪಟ್ಟಿಯಿಂದ ಹೊರಗಿಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಮೂರನೇ ಸ್ಥಾನದಲ್ಲಿದ್ದಾರೆ.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ದೇವೇಂದ್ರ ಫಡ್ನವೀಸ್ ಇದ್ದಾರೆ.

 ಇವರ ಜೊತೆಗೆ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಸದಾನಂದ ಗೌಡ, ಅನಂತ್ ಕುಮಾರ್, ನಿರ್ಮಲಾ ಸೀತಾರಾಮನ್, ಪ್ರಕಾಶ್ ಜಾವ್ಡೇಕರ್, ಪಿಯೂಷ್ ಗೋಯೆಲ್, ರವಿಶಂಕರ್ ಪ್ರಸಾದ್, ರಾಮ್ ಲಾಲ್, ಮುರುಳೀಧರ್ ರಾವ್, ಪುರಂದರೇಶ್ವರಿ, ಬಿ. ಎಲ್. ಸಂತೋಷ್, ಅರುಣ್ ಕುಮಾರ್, ಸ್ಮೃತಿ ಇರಾನಿ, ತಾವರ್ ಚಂದ್ ಗೆಹ್ಲೋಟ್, ಸಾಧ್ವಿ ನಿರಂಜನ ಜ್ಯೋತಿ, ಎನ್. ರವಿಕುಮಾರ್, ಮನೋಜ್ ತಿವಾರಿ, ಹೇಮಾಮಾಲಿನಿ ಇದ್ದಾರೆ. 

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ರಾಜ್ಯ ನಾಯಕರಾದ ಪ್ರಹ್ಲಾದ್ ಜೋಷಿ, ಬಿ. ಶ್ರೀರಾಮುಲು, ಪಿ.ಸಿ.ಮೋಹನ್, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಶೋಭಾ ಕರಂದ್ಲಾಜೆ, ಬಿ.ಜೆ. ಪುಟ್ಟಸ್ವಾಮಿ, ಡಿ. ಎಸ್. ವೀರಯ್ಯ, ತಾರಾ ಅನುರಾಧ, ಶೃತಿ ತಾರಾ ಪ್ರಚಾರಕರಾಗಿದ್ದಾರೆ.

Share:

No comments:

Post a Comment

Recent Posts

For Advertisement contact 9008814254