ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ 'ಸುಕನ್ಯಾ ಸಮೃದ್ಧಿ' ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು. powered by Rubicon Project ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ 'ಸುಕನ್ಯಾ ಸಮೃದ್ಧಿ' ಉಳಿತಾಯ ಖಾತೆಯನ್ನು ತೆರೆಯಬಹುದಾಗಿದೆ. ಈ ಖಾತೆ ಆರಂಭಗೊಂಡ ದಿನದಿಂದ 21 ವರ್ಷಗಳವರೆಗೆ ಚಾಲ್ತಿಯಲ್ಲಿ ಇರುತ್ತದೆ.
ಯಾರು ಖಾತೆ ತೆರೆಯಬಹುದು : ಸರ್ಕಾರಿ ಮತ್ತು ಖಾಸಗಿ ವಾಣಿಜ್ಯೋದ್ಯಮ ಸಂಸ್ಥೆಗಳ ನೌಕರರು, ವ್ಯಾಪಾರ, ಸ್ವಂತ ಉದ್ದಿಮೆ ಸೇರಿದಂತೆ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದು.
ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ಖಾತೆ ತೆರೆಯುವ ಸಂದರ್ಭದಲ್ಲಿ ಮಗುವಿನ ಜನನ ಪ್ರಮಾಣ ಪತ್ರ, ಪೋಷಕರ ಗುರುತಿನ ಚೀಟಿ, ವಿಳಾಸ ದೃಢೀಕರಣ ದಾಖಲೆಗಳು ಅಗತ್ಯವಾಗಿವೆ.
ಎಷ್ಟು ಠೇವಣಿ ಇಡಬೇಕು : ಸುಕನ್ಯಾ ಸಮೃದ್ಧಿ ಖಾತೆ ತೆರೆಯಲು ಆರಂಭಿಕ ಠೇವಣಿ 1000 ರೂ.. ಪ್ರತಿವರ್ಷ ಖಾತೆಗೆ ಕನಿಷ್ಠ 1000 ರೂ. ಜಮಾ ಮಾಡಬೇಕು. ಪ್ರತಿ ಹಣಕಾಸು ವರ್ಷದಲ್ಲಿ 1000 ರೂ.ನಿಂದ ಗರಿಷ್ಠ 1.5 ಲಕ್ಷ ರೂಪಾಯಿ ವರೆಗೆ ಜಮಾ ಮಾಡಲು ಅವಕಾಶವಿದೆ. ಹೂಡಿಕೆ ಮಾಡಿದ ಮೊತ್ತಕ್ಕೆ ವಾರ್ಷಿಕವಾಗಿ ಬಡ್ಡಿ, ಚಕ್ರಬಡ್ಡಿ ನೀಡಲಾಗುತ್ತದೆ. ಪ್ರಸಕ್ತ ಬಡ್ಡಿ ದರ ಶೇ 9.10.
21 ವರ್ಷ ಖಾತೆ ಇರುತ್ತದೆ : ಇದೊಂದು ದೀರ್ಘಕಾಲಿನ ಉಳಿತಾಯ ಖಾತೆಯಾಗಿದೆ. ಸುಕನ್ಯಾ ಸಮೃದ್ಧಿ ಉಳಿತಾಯ ಖಾತೆಯು ಆರಂಭಗೊಂಡ ದಿನದಿಂದ 21 ವರ್ಷದವರೆಗೂ ಚಾಲ್ತಿಯಲ್ಲಿರುತ್ತದೆ. ಯಾವ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಲಾಗಿದೆಯೋ ಆಕೆಗೆ 18 ವರ್ಷ ಪೂರ್ಣಗೊಂಡ ನಂತರ, ಆಕೆಯು ತನ್ನ ಖಾತೆಯಲ್ಲಿ ಜಮಾ ಆದ ಹಣದಲ್ಲಿ ಅರ್ಧ ಭಾಗವನ್ನು ಉನ್ನತ ಶಿಕ್ಷಣ, ಮದುವೆಯ ಉದ್ದೇಶಕ್ಕೆ ಬಳಸಬಹುದು.
ವರ್ಗಾವಣೆಗೆ ಮಾಡಿಸಿಕೊಳ್ಳಬಹುದು : ನೀವು ಖಾತೆ ತೆರೆದ ಊರಿನಿಂದ ಬೇರೆ ಊರಿಗೆ ವರ್ಗಾವಣೆಗೊಂಡರೆ ಖಾತೆಯನ್ನು ಆ ಊರಿಗೆ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯಡಿ ಸಮೀಪದ ಅಂಚೆ ಕಚೇರಿಗಳಲ್ಲಿ ಖಾತೆ ತೆರೆಯಬಹುದಾಗಿದೆ. ಯೋಜನೆಯ ಎಲ್ಲಾ ಮಾಹಿತಿ ಅಂಚೆ ಕಚೇರಿಗಳಲ್ಲಿ ಲಭ್ಯವಿದೆ.
ARTICLE BY -- NAMO TEAM SHAHABAD
No comments:
Post a Comment