WELCOME TO NAMO BRIGADE SHAHABAD OFFICIAL WEBSITE

Pm Modi's schedule for Karnataka bjp election campaign

ಏ.29ರಿಂದ ಕರ್ನಾಟಕದಲ್ಲಿ ಮೋದಿ ಪ್ರಚಾರ, ಎಲ್ಲೆಲ್ಲಿ ಸಮಾವೇಶ?
ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಬಳ್ಳಾರಿ, ಬೆಳಗಾವಿಯಲ್ಲಿ ಸಮಾವೇಶಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 29 ರಿಂದ ಮೇ 7ರ ತನಕ ವಿವಿಧ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರು ರಾಜ್ಯದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಏಪ್ರಿಲ್ ಅಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಆಗಮಿಸಲಿದ್ದು, ಪ್ರಚಾರ ಮತ್ತಷ್ಟು ಬಿರುಸಾಗಲಿದೆ.

ಬಿಜೆಪಿಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ವಿಧಾನಸಭೆ ಚುನಾವಣೆಗೆ ಅಂತಿಮ ಹಂತದ ಪ್ರಚಾರ ನಡೆಸಲಿದ್ದಾರೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 7ರ ತನಕ ಮೋದಿ ರಾಜ್ಯದಲ್ಲಿ ಮತ ಯಾಚನೆ ಮಾಡಲಿದ್ದಾರೆ.
ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಉಡುಪಿ, ಕಲಬುರ್ಗಿ, ಹುಬ್ಬಳ್ಳಿ, ಶಿವಮೊಗ್ಗ, ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಎಲ್ಲೆಲ್ಲಿ ಸಮಾವೇಶಗಳಿವೆ? ಎಂಬ ಮಾಹಿತಿ ಇಲ್ಲಿದೆ...

ರಾಯಚೂರಿನಲ್ಲಿ ಸಮಾವೇಶ
ಏಪ್ರಿಲ್ 29ರಂದು ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದು 2018ರ ವಿಧಾನಸಭೆ ಚುನಾವಣೆಗೆ ಅಂತಿಮ ಹಂತದ ಪ್ರಚಾರ ಕಾರ್ಯವನ್ನು ಆರಂಭಿಸಲಿದ್ದಾರೆ. ರಾಯಚೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಯಚೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ನಡೆಸಿದ್ದಾರೆ.
ಬಳ್ಳಾರಿ, ಬೆಳಗಾವಿಯಲ್ಲಿ ಸಮಾವೇಶ
ಮೇ 1ರಂದು ಪ್ರಧಾನಿ ಮೋದಿ ರಾಜ್ಯದಲ್ಲಿ ಎರಡು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಂಬೈ ಕರ್ನಾಟಕ ಭಾಗದ ಬೆಳಗಾವಿ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಬಳ್ಳಾರಿಯಲ್ಲಿ ಮೋದಿ ಸಮಾವೇಶಗಳು ನಡೆಯಲಿವೆ.
ಬೆಳಗಾವಿ ರಾಜ್ಯದಲ್ಲಿಯೇ ಅತಿ ಹೆಚ್ಚು (18) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಜಿಲ್ಲೆ. ಆದ್ದರಿಂದ, ಮೋದಿ ಅಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಬಿಜೆಪಿಗೆ ಬೆಂಬಲ ನೀಡುವಂತೆ ಜನರಲ್ಲಿ ಮನವಿ ಮಾಡಲಿದ್ದಾ ರೆ.
ಚಾಮರಾಜನಗರ, ಉಡುಪಿ

ಮೇ 3, 2018ರಂದು ನರೇಂದ್ರ ಮೋದಿ ಚಾಮರಾಜನಗರ ಮತ್ತು ಉಡುಪಿ ಜಿಲ್ಲೆಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ.

ಉಡುಪಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈಗಾಗಲೇ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ. ಮಂಗಳೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಿದ್ದಾರೆ. ಈಗ ಕರಾವಳಿ ಭಾಗದಲ್ಲಿ ಮೋದಿ ಮತ್ತೊಮ್ಮೆ ಪ್ರಚಾರ ನಡೆಸಲಿದ್ದಾರೆ
4 ಜಿಲ್ಲೆಗಳಲ್ಲಿ ನರೇಂದ್ರ ಮೋದಿ ಪ್ರಚಾರ
ಮೇ 5, 2018ರಂದು ಕಲಬುರಗಿ, ಹುಬ್ಬಳ್ಳಿ, ಮೇ 6, 2018ರಂದು ಶಿವಮೊಗ್ಗ ಮತ್ತು ತುಮಕೂರಿನಲ್ಲಿ ನರೇಂದ್ರ ಮೋದಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಯೋಗಿ ಆದಿತ್ಯನಾಥ್ ಒಂದು ಸುತ್ತಿನ ಪ್ರಚಾರ ಕಾರ್ಯವನ್ನು ನಡೆಸಿದ್ದಾರೆ.
ಶಿವಮೊಗ್ಗ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ. ಅಲ್ಲಿ ಪ್ರಚಾರ ನಡೆಸುವ ಮೂಲಕ ನರೇಂದ್ರ ಮೋದಿ ಯಡಿಯೂರಪ್ಪ ಅವರ ಬಲವನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ.

ಬೆಂಗಳೂರು, ಮಂಗಳೂರು
ಮೇ 7ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಮಂಗಳೂರು ಕರಾವಳಿ ಭಾಗದ ಪ್ರಮುಖ ನಗರವಾಗಿದ್ದು, ಮೋದಿ ಸಮಾವೇಶದಿಂದ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂಬ ನಿರೀಕ್ಷೆಯಲ್ಲಿದೆ ಬಿಜೆಪಿ.
ಬೆಂಗಳೂರು ನಗರದಲ್ಲಿ 28 ಕ್ಷೇತ್ರಗಳಿದ್ದು ಎಲ್ಲಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ಫೆಬ್ರವರಿ 4ರಂದು ನಡೆದಿತ್ತು. ಆಗ ಮೋದಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.

Article  by :- Rodney elizer...
Share:

Related Posts:

No comments:

Post a Comment

For Advertisement contact 9008814254